:
ಗುರೆಳ್ಳು
ಗುರೆಳ್ಳು ಉತ್ತರ ಕರ್ನಾಟಕದ ಜಿಲ್ಲೆಗಳಾದ ಬೀದರ, ಕಲಬರ್ಗಿ, ರಾಯಚೂರು, ಬಳ್ಳಾರಿ, ಕೊಪ್ಪಳ, ಬಾಗಲಕೋಟೆ, ಗದಗ, ಹಾವೇರಿ, ಬೆಳಗಾವಿ ಹಾಗೂ ಧಾರವಾಡ ಭಾಗಗಳಲ್ಲಿ ಚೆನ್ನಾಗಿ ನೀರು ಬಸಿದು ಹೋಗುವ ಕೆಂಪು ಮರಳು ಮಿಶ್ರಿತ, ತಿಳಿ ಮತ್ತು ಕಪ್ಪು ಮಣ್ಣುಗಳಲ್ಲಿ ಬೆಳೆಯಬಹುದು. ಈ ಬೆಳೆಗೆ ರೋಗ, ಕೀಟ, ಪ್ರಾಣಿಗಳ ಹಾಗೂ ಪಕ್ಷಿಗಳ ಕಾಟ ಮತ್ತು ಬರ ತಡೆದುಕೊಳ್ಳುವ ಶಕ್ತಿ ಹೊಂದಿರುವ್ರದಲ್ಲದೇ, ಸ್ವಲ್ಪ ಮಟ್ಟಿಗೆ ಕ್ಷಾರ ಸ್ವಭಾವದ ಮಣ್ಣುಗಳಿಗೆ ಹೊಂದಿಕೊಂಡು ಬೆಳೆಯುವ ಶಕ್ತಿ ಇದೆ. ಆದ್ದರಿಂದ ಇದು ಅಲ್ಪ ಖರ್ಚಿನಲ್ಲಿ ಹೆಚ್ಚಿನ ಲಾಭ ಕೊಡುವ ಎಣ್ಣೆ ಕಾಳು ಬೆಳೆಯಾಗಿದ್ದು, ಶೇಕಡಾ 35-42 ರಷ್ಟು ಎಣ್ಣೆ ಅಂಶ ಹೊಂದಿರುತ್ತದೆ.