Submitted by naipagropediaraichur on Mon, 09/04/2012 - 10:57
Posted in
ಸಾಗುವಳಿ ಕ್ರಮದಲ್ಲಿ ದುಂಡಾಣು ಅಂಗಮಾರಿ ರೋಗದ ನಿರ್ವಹಣೆ
ನಾಟಿ ಪೂರ್ವದಲ್ಲಿ ಅನುಸರಿಸಬೇಕಾದ ಕ್ರಮಗಳು
- ರೋಗ ರಹಿತ ಸಸಿಗಳನ್ನು ನಾಟಿಗೆ ಬಳಸಬೇಕು.
- ಶಿಫಾರಸ್ಸು ಮಾಡಿದ ಪೋಷಕಾಂಶಗಳ ಜೊತೆಗೆ ಕೊಟ್ಟಿಗೆ ಗೊಬ್ಬರ ಅಥವಾ ಎರೆ ಹುಳುವಿನ ಗೊಬ್ಬರವನ್ನು ಹೆಚ್ಚಾಗಿ ಬಳಸುವದರಿಂದ ಗಿಡದಲ್ಲಿ ರೋಗ ನಿರೋಧಕತೆ ಹೆಚ್ಚಾಗಿ ರೋಗದ ತೀವ್ರತೆಯನ್ನು ಕಡಿಮೆ ಗೊಳಿಸಬಹುದು.
ಚಾಟನಿ ಪೂರ್ವ ಮತ್ತು ನಂತರದಲ್ಲಿ ಅನುಸರಿಸಬೇಕಾದ ಕ್ರಮಗಳು
- ದಾಳಿಂಬೆ ತೋಟವನ್ನು ಸ್ವಚ್ಚವಾಗಿಡುವ್ರದು, ರೋಗ ಪೀಡಿತ ಎಲೆ, ಕಾಂಡ ಮತ್ತು ಕಾಯಿಗಳನ್ನು ಕಿತ್ತು ಸುಡಬೇಕು. ಇದರಿಂದ ರೋಗ ಪ್ರಸಾರವನ್ನು ತಡೆಗಟ್ಟಬಹುದು.
-
ದಾಳಿಂಬೆ ಬೆಳೆಯನ್ನು ಹಸ್ತ ಬಹಾರ್ (ಸೆಪ್ಟೆಂಬರ್ - ಅಕ್ಟೋಬರ್)ನಲ್ಲಿ ಚಾಟಿನಿ ಮಾಡಬೇಕು.
- ಹಣ್ಣುಗಳನ್ನು ತಗೆದ ನಂತರ ಗಿಡಗಳಿಗೆ ಕನಿಷ್ಠ 6 ತಿಂಗಳು ವಿಶ್ರಾಂತಿ ಕೊಡಬೇಕು.
- Login to post comments
- 905 reads